ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ: ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ

Update: 2022-10-20 14:46 GMT
ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು, ಅ.20: ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗವು ದನ ಮತ್ತು ಎಮ್ಮೆಗಳಲ್ಲಿ ಕಂಡು ಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.

ದ.ಕ.ಜಿಲ್ಲೆಯಲ್ಲಿ ಚರ್ಮ ಗಂಟುರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಈ ರೋಗದಿಂದ ಜಾನುವಾರು ಮಾಲಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ಅ.20ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News