ಅಕ್ಷರ ಸಂತರ ಶಿಕ್ಷಣ ಪ್ರೀತಿ ಹೋಲಿಕೆಗೆ ನಿಲುಕದ್ದು: ಡಾ.ಕುಮಾರ್

Update: 2022-10-20 16:49 GMT

ಮಂಗಳೂರು, ಅ.20: ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಿಕ್ಷಣ ಪ್ರೀತಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಕೊಡುಗೆಯು ಯಾವುದೇ ರೀತಿಯ ಹೋಲಿಕೆಗೆ ನಿಲುಕದ್ದಾಗಿದೆ ಎಂದು ದ.ಕ.ಜಿಪಂ ಸಿಇಒ ಡಾ. ಕುಮಾರ್ ಅಭಿಪ್ರಾಯಪಟ್ಟರು.

ಬೆಂಗಳೂರಿನ ಆರ್.ವಿ.ಶಿಕ್ಷಣ ಸಂಸ್ಥೆಯು ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನೀಡಲಾದ 5 ಲಕ್ಷ ರೂ.ಗಳ ಚೆಕ್ಕನ್ನು ನಗರದ ಕೊಟ್ಟಾರದಲ್ಲಿರುವ ದ.ಕ.ಜಿಪಂನ ಮಿನಿ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ವಿತರಿಸಿ ಅವರು ಮಾತನಾಡಿದರು.

ಹರೇಕಳ ಹಾಜಬ್ಬರ ಮನವಿಯಂತೆ ಆರ್.ವಿ. ಶಿಕ್ಷಣ ಸಂಸ್ಥೆಯು ಹಾಜಬ್ಬರ ಕನಸಿನ ಪಿಯು ಕಾಲೇಜಿನ ಕಟ್ಟಡ ನಿರ್ಮಾಣಕ್ಕಾಗಿ 5 ಲಕ್ಷ ರೂ.ಗಳ ದೇಣಿಗೆ ನೀಡಿದೆ. ಇದು  ಕನಸಿಗೆ ನೀರೆರೆಯುವ ಕೆಲಸವಾಗಿದೆ ಎಂದು ಡಾ. ಕುಮಾರ್ ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಹರೇಕಳ ಹಾಜಬ್ಬ, ಆರ್.ವಿ. ಶಿಕ್ಷಣ ಸಂಸ್ಥೆಯ ಡಾ.ಸಂತೋಷ್, ಫೈನಾನ್ಸ್ ಮ್ಯಾನೇಜರ್ ಶ್ರೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುಧಾಕರ, ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್, ಮಂಗಳೂರು ದಕ್ಷಿಣ ಕ್ಷೇತ್ರ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್ ಹಾಗೂ ಹರೇಕಳ ನ್ಯೂಪಡ್ಪು ಸರಕಾರಿ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News