​ಉಚಿತ ಟ್ಯಾಬ್ ವಿತರಣೆಗೆ ಅರ್ಜಿ ಆಹ್ವಾನ

Update: 2022-10-20 17:02 GMT

ಮಂಗಳೂರು, ಅ.20: ಕರ್ನಾಟಕ ಮಾಧ್ಯಮ ಅಕಾಡಮಿಯಿಂದ ೨೦೨೨-೨೩ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಟ್ಯಾಬ್‌ಗಳನ್ನು ನೀಡಲು ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆುಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಟ ೧೦ ವರ್ಷಗಳ ಅನುಭವವಿರಬೇಕು.

ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಪತ್ರಿಕೆಯು ನಿರಂತರವಾಗಿ ಪ್ರಕಟಗೊಳ್ಳುತ್ತಿದ್ದು, ಪತ್ರಿಕೆ ಮೇಲಾಗಲಿ ಹಾಗೂ ಸಂಪಾದಕರ ಮೇಲಾಗಲಿ ಯಾವುದೇ ರೀತಿಯ ಕ್ರಿಮಿನಲ್ ಅಪರಾಧ ಮೊಕದ್ದಮೆಗಳು ಇರಬಾರದು.

ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರಕಾರಿ ಸಂಸ್ಥೆಗಳಿಂದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಪುನಃ ಅರ್ಜಿ ಸಲ್ಲಿಸುವಂತಿಲ್ಲ. ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ.

ಅಭ್ಯರ್ಥಿಗಳು ಸ್ವಯಂ ಅರ್ಜಿಯೊಂದಿಗೆ 10 ವರ್ಷ ಸೇವಾ ಅನುಭವ, ಜಾತಿ ಪ್ರಮಾಣ ಪತ್ರ, ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಪಡೆದ ಸೇವಾ ದೃಢೀಕರಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ಲಗತ್ತಿಸಿ ಅಕಾಡಮಿಯ ಇಮೇಲ್ karnatakamediaacademy@gmail.com ಗೆ ಸಲ್ಲಿಸಬೇಕು ಅಥವಾ ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡಮಿ, ಪೋಡಿಯಂಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್. ಅಂಬೇಡ್ಕರ್ ಬೀದಿ, ಬೆಂಗಳೂರು-೫೬೦೦೦೧ ಈ ವಿಳಾಸಕ್ಕೆ ಅಂಚೆ ಮೂಲಕ ನವೆಂಬರ್ ೧೦ರೊಳಗೆ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News