2 ಕ್ಷೇತ್ರಗಳಿಂದ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ

Update: 2022-10-22 14:19 GMT

ರಾಮನಗರ, ಅ. 22: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಯಾವುದೇ ಕಾರಣಕ್ಕೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಬಿಟ್ಟು ಹೋಗುವುದಿಲ್ಲ. ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಶನಿವಾರ ಜಿಲ್ಲೆಯ ಚನ್ನಪಟ್ಟಣದಲ್ಲಿ ಅಲ್ಪಸಂಖ್ಯಾತರ ಘಟಕದ ಕಚೇರಿ ಉದ್ಘಾಟನೆ ನೆರವೇರಿಸಿದ ನಂತರ ಮಾತನಾಡಿದ ಅವರು, ‘ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕರೆಯುತ್ತಿದ್ದಾರೆ. ಆದರೆ ನಾನು ಚನ್ನಪಟ್ಟಣದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ಎರಡು ಕ್ಷೇತ್ರಗಳಿಂದ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ' ಎಂದು ಹೇಳಿದರು.

ಯೋಗೇಶ್ವರ್ ತರಹದ ಇನ್ನೂ ನೂರು ಜನರನ್ನು ಸರಕಾರ ಕಳುಹಿಸಿದರೂ ನಾನು ಹೆದರಿ ಪಲಾಯನ ಮಾಡುವ ಪೈಕಿ ಅಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಕೊಳಕು ಮಾಡಿ ಹಾಳು ಮಾಡಿದ್ದು ಅವರು. ಅದನ್ನೆಲ್ಲ ನಾನು ಈಗ ನಾನು ಕ್ಲೀನ್ ಮಾಡುತ್ತಿದ್ದೇನೆ. ಸಿ.ಪಿ.ಯೋಗೇಶ್ವರ್ ಡಾ.ಅಂಬೇಡ್ಕರ್ ಭವನ ಕಟ್ಟುವುದಕ್ಕೆ ಬಿಡುತ್ತಿಲ್ಲ. ವಿನಾಕಾರಣ ಜನರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಅವರು ದೂರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News