ಛತ್ತೀಸ್‌ಗಢ ಆರೋಗ್ಯ ಕೇಂದ್ರದಲ್ಲಿ ನರ್ಸ್ ಅನ್ನು ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ

Update: 2022-10-23 06:17 GMT
Photo:PTI

ಭೋಪಾಲ್: ಛತ್ತೀಸ್‌ಗಢದ ಆರೋಗ್ಯ ಕೇಂದ್ರದಲ್ಲಿ ನರ್ಸ್‌ಯೊಬ್ಬರನ್ನು ಕಟ್ಟಿಹಾಕಿ, ನಾಲ್ವರು ಗ್ಯಾಂಗ್‌ರೇಪ್ ಮಾಡಿದ್ದು, ಆರೋಪಿಗಳ  ಪೈಕಿ ಒಬ್ಬಾತ ಅಪ್ರಾಪ್ತ ವಯಸ್ಸಿನವನು ಎಂದು ಪೊಲೀಸರು ತಿಳಿಸಿದ್ದಾರೆ.

17 ವರ್ಷದ ಅಪ್ರಾಪ್ತ ವಯಸ್ಸಿನವನು ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ.

ನಾಲ್ವರು ಆರೋಪಿಗಳು ಘಟನೆಯ ವೀಡಿಯೊವನ್ನು  ದಾಖಲಿಸಿಕೊಂಡಿದ್ದಾರೆ ಮತ್ತು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನರ್ಸ್ ಆರೋಪಿಸಿದ್ದಾರೆ.

ಮಹೇಂದ್ರಗಢ ಜಿಲ್ಲೆಯ ಚಿಪ್ಚಿಪಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಗ್ಯ ಕೇಂದ್ರದಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆಯನ್ನು ಆರೋಪಿ ಗಮನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಕೇಂದ್ರಕ್ಕೆ ಪ್ರವೇಶಿಸಿದ್ದ ಆರೋಪಿಗಳು ನರ್ಸನ್ನು ಕಟ್ಟಿಹಾಕಿದರು. ಆಕೆಯ ಬಾಯಿಯನ್ನು ಬಿಗಿದರು , ನಂತರ ಆಕೆಯ  ಮೇಲೆ ಅತ್ಯಾಚಾರ ಎಸಗಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ನರ್ಸ್ ಪೋಷಕರಿಗೆ ಮಾಹಿತಿ ನೀಡಿ ಪೊಲೀಸರಿಗೆ ದೂರು ನೀಡಿದ್ದರು.

ಆರೋಗ್ಯ ಕಾರ್ಯಕರ್ತರ ಗುಂಪು ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಹಾಗೂ  ಅವರಿಗೆ ಭದ್ರತೆಯನ್ನು ಒದಗಿಸುವಂತೆ ಛತ್ತೀಸ್‌ಗಢ ಸರಕಾರವನ್ನು ಒತ್ತಾಯಿಸಿದೆ.

"ನಮಗೆ ರಕ್ಷಣೆ ಬೇಕು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ನಾವು ಕೆಲಸ ಮಾಡುವುದಿಲ್ಲ'' ಎಂದು ಜಿಲ್ಲೆಯ ಆರೋಗ್ಯ ಕೇಂದ್ರದ ಮುಖ್ಯ ಆರೋಗ್ಯಾಧಿಕಾರಿ ಪ್ರತಿಮಾ ಸಿಂಗ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News