ಕಾಣಿಯೂರಿನಲ್ಲಿ ಬಟ್ಟೆ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ: ಆರು ಮಂದಿ ಬಂಧನ

Update: 2022-10-23 13:04 GMT
ಹಲ್ಲೆಗೊಳಗಾದ ಮುಹಮ್ಮದ್ ರಫೀಕ್, ರಮೀಝುದ್ದೀನ್ 

ಮಂಗಳೂರು, ಅ. 23: ಕಡಬ ತಾಲೂಕಿನ ಕಾಣಿಯೂರು ಗ್ರಾಮದಲ್ಲಿ ಇಬ್ಬರು ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ತಿಳಿಸಿದ್ದಾರೆ.

ಬಂಧಿತರನ್ನು ಪುನಿತ್, ರಾಜು, ಪ್ರಸಾದ್, ಕಿಶೋರ್, ಭವಿತ್, ರಂಜಿತ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 144, 341, 504, 323, 324, 427, 149ರಡಿ  ಪ್ರಕರಣ ದಾಖಲಾಗಿದೆ.‌

ಹಲ್ಲೆಗೊಳಗಾದ ರಮೀಝುದ್ದೀನ್ ಮತ್ತು ರಫೀಕ್ ವಿರುದ್ಧ ಪರಿಶಿಷ್ಟ ಜಾತಿ, ಪಂಗಡ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 448, 354, 341ರಡಿ ಪ್ರಕರಣ ದಾಖಲಿಸಲಾಗಿದೆ. ಈ ಇಬ್ಬರು ಆರೋಪಿಗಳು ಆಸ್ಪತ್ರೆಯಲ್ಲಿದ್ದು, ಪೊಲೀಸ್ ನಿಗಾದಲ್ಲಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. 

ಇದನ್ನು ಓದಿ : ನಾವು ಸತ್ತಿದ್ದೇವೆ ಅಂತ ಭಾವಿಸಿ ಬಿಟ್ಟು ಹೋದರು: ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆಗೊಳಗಾದ ರಫೀಕ್-ರಮೀಝುದ್ದೀನ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News