ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನ: ಸ್ಪರ್ಧೆಯಿಂದ ಹಿಂದೆ ಸರಿದ ಸೌರವ್ ಗಂಗುಲಿ

Update: 2022-10-24 06:19 GMT
Sourav ganguly Photo:PTI

ಕೋಲ್ಕತಾ: ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗುಲಿ ಅವರು ಬಂಗಾಳ ಕ್ರಿಕೆಟ್ ಸಂಸ್ಥೆ(ಸಿಎಬಿ)ಅಧ್ಯಕ್ಷ ಸ್ಥಾನವನ್ನು ಮತ್ತೆ ವಹಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಸೌರವ್ ಅವರ ಸಹೋದರ ಸ್ನೇಹಶಿಶ್ ಗಂಗುಲಿ ಸಿಎಬಿಯ ನೂತನ ಅಧ್ಯಕ್ಷರಾಗಲಿದ್ದಾರೆ.

ಸಿಎಬಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು  ಕಳೆದ ವಾರ ಹೇಳಿದ್ದ ಗಂಗುಲಿ ಇದೀಗ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ.

"ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ಸ್ಪರ್ಧಿಸುತ್ತೇನೆ ಎಂದಿದ್ದೆ. ಆದರೆ ಅವಿರೋಧ ಆಯ್ಕೆ ನಡೆಯಲಿರುವುದರಿಂದ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ. ನಾನು ಮತ್ತೆ ಅವಿರೋಧವಾಗಿ ಆಯ್ಕೆಯಾಗುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ಬಂಗಾಳ ಕ್ರಿಕೆಟ್ ಸಂಸ್ಥೆಗೆ ಕೆಲಸ ಮಾಡಲು ಇತರಿಗೆ ಅವಕಾಶ ಸಿಗಲಿ'' ಎಂದು ಗಂಗುಲಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News