ಕಾಪು : ಸರ್ವಧರ್ಮೀಯ ಸಾಧಕರನ್ನು ಗೌರವಿಸುವ ಮೂಲಕ ದೀಪಾವಳಿ ಆಚರಣೆ

Update: 2022-10-24 13:48 GMT

ಕಾಪು : ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಕಾಪು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಸೋಮವಾರ ದೀಪಾವಳಿಯನ್ನು ಸರ್ವಧರ್ಮೀಯ ಸಾಧಕರನ್ನು ಗೌರವಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿದರು.

ಕಾರ್ಯಕ್ರಮದಲ್ಲಿ ಹಝ್ರತ್ ಸಾದಾತ್ ವೃದ್ಧಾಶ್ರಮದ ಮಹಮ್ಮದ್ ಶಾಫಿ ಬುದಾರಿ, ಕಟಪಾಡಿ ಕಾರುಣ್ಯ ವೃದ್ಧಾಶ್ರಮದ ಕುಮಾರ್, ಆಸರೆ ಹಿರಿಯ ನಾಗರಿಕರ ವಸತಿ ಆಶ್ರಮದ ಪೆನ್ವೇಲ್ ಸೋನ್ಸ್ ಅವರನ್ನು ಸನ್ಮಾನಿಸಲಾಯಿತು. ವಿವಿಧ ಆಶ್ರಮ ನಿವಾಸಿಗಳಿಗೆ ಹೊಸ ಬಟ್ಟೆ, ಸಿಹಿ ತಿಂಡಿ ಮತ್ತು ಆಹಾರ ಸಾಮಗ್ರಿಗಳನ್ನು ಹಸ್ತಾಂತರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಕಾಂಗ್ರೆಸ್ ಪಕ್ಷ ಎಲ್ಲಾ ಧರ್ಮ, ಜಾತಿ, ಮತ, ಸಮುದಾಯ ಮತ್ತು ವರ್ಗಗಳ ಜನರೊಂದಿಗೆ ಬೆರೆಯುವ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಲು ನಿರಂತರವಾಗಿ ಶ್ರಮಿಸುತ್ತಿದೆ. ಅದಕ್ಕೆ ಪೂರಕವಾಗಿ ಎಲ್ಲಾ ವರ್ಗದವರನ್ನು ಜೊತೆ ಸೇರಿಸಿಕೊಂಡು ದೀಪಾವಳಿ ಸಂಭ್ರಮವನ್ನು ಆಚರಿಸುವ ಮೂಲಕ ಕಾಂಗ್ರೆಸ್ ಎಲ್ಲರ ಪಕ್ಷ ಎನ್ನುವುದನ್ನು ತೋರಿಸಿಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಕಛೇರಿ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗೆ ಸಮಾನವಾಗಿದ್ದು ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶಗಳಿವೆ ಎಂದರು.

ಹಿರಿಯ ಕಾಂಗ್ರೆಸ್ ಮುಖಂಡ ಮೋಹನ್‍ಚಂದ್ರ ನಂಬಿಯಾರ್ ಉದ್ಘಾಟಿಸಿ ಶುಭಹಾರೈಸಿದರು. ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಮಹಿಳಾ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್, ಕಾಪು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಸಾಧಿಕ್, ಕಾಪು ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಶ್ವಿನಿ ನವೀನ್, ಪಕ್ಷದ ಮುಖಂಡರಾದ ಶೇಖರ್ ಹೆಜಮಾಡಿ, ನವೀನ್ ಶೆಟ್ಟಿ, ಲಕ್ಷ್ಮೀಶ ತಂತ್ರಿ, ಅಬ್ದುಲ್ ರೆಹಮಾನ್, ಹರೀಶ್ ನಾಯಕ್, ಗೋಪಾಲ ಪೂಜಾರಿ, ಗಣೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಕಾಪು ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳು ಸ್ವಾಗತಿಸಿದರು. ಸುಧಾಕರ ಕೆ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News