ಅ.28: ಪಣಂಬೂರಿನಲ್ಲಿ ಕೋಟಿ ಕಂಠ ಗಾಯನ
ಮಂಗಳೂರು: ದ.ಕ. ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅ.28ರ ಪೂ.11ಕ್ಕೆ ಪಣಂಬೂರು ಕಡಲ ಕಿನಾರೆಯಲ್ಲಿ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಸಚಿವರಾದ ಎಸ್.ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಶಾಸಕರಾದ ಯು.ಟಿ. ಖಾದರ್, ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ ಉಳ್ಳಿಪಾಡಿ, ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಹರೀಶ್ ಕುಮಾರ್, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕೆ. ಪ್ರತಾಪ ಸಿಂಹ ನಾಯಕ್, ಮಂಜುನಾಥ್ ಭಂಡಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಐ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.