ವಿಜಯಪುರ: ಟ್ರ್ಯಾಕ್ಟರ್ - ಕ್ರೂಸರ್‌ ಢಿಕ್ಕಿ; ದಂಪತಿ ಸ್ಥಳದಲ್ಲೇ ಮೃತ್ಯು

Update: 2022-10-27 05:31 GMT

ವಿಜಯಪುರ: ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂದಿನಿಂದ ಬಂದ ಕ್ರೂಸರ್‌ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ಬಳಿ ನಡೆದಿದೆ.‌

ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ದಂಪತಿ, ಶಿವಪುತ್ರ ಶಿಂಧೆ (50) ಹಾಗು ಸುಮಿತ್ರಾ ಶಿಂಧೆ (45) ಸ್ಥಳದಲ್ಲೇ ಮೃತಪಟ್ಟವರು ಎಂದು ತಿಳಿದುಬಂದಿದೆ.

ಕ್ರೂಸರ್‌ನಲ್ಲಿದ್ದ ಸುಮಾರು 9 ಮಂದಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News