ಮೂಡಿಗೆರೆ: ಹೊಂಡಕ್ಕೆ ಬಿದ್ದ ಕಾರು, ಐವರಿಗೆ ಗಾಯ

Update: 2022-10-27 06:19 GMT

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡ ಘಟನೆ ಬುಧವಾರ ತಡರಾತ್ರಿ ನಡೆದಿದೆ. 

ಹಾಸನ ಜಿಲ್ಲೆಯ ಅರಸೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕಾರು ಮೂಡಿಗೆರೆ ತಾಲೂಕಿನ ಘಲ್ಗುಣಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ. 

ಘಟನೆಯಿಂದ ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 

ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. 

ಇದನ್ನೂ ಓದಿ: ವಿಜಯಪುರ: ಟ್ರ್ಯಾಕ್ಟರ್ - ಕ್ರೂಸರ್‌ ಢಿಕ್ಕಿ; ದಂಪತಿ ಸ್ಥಳದಲ್ಲೇ ಮೃತ್ಯು

Similar News