ಹಾವು ಕಚ್ಚಿ ಗರ್ಭಿಣಿ ಮೃತ್ಯು
Update: 2022-10-27 12:12 GMT
ವಿಜಯಪುರ : ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ವರದಿಯಾಗಿದೆ.
ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ (25) ಮೃತಪಟ್ಟಿರುವ ಮಹಿಳೆ ಎಂದು ತಿಳಿದು ಬಂದಿದೆ.
ಹಾವು ಕಚ್ಚಿರುವುದು ವಿಚಾರ ತಿಳಿದ ತಕ್ಷಣ ಮಹಿಳೆಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ಪ್ರಾಥಮಿಕ ಚಿಕಿತ್ಸೆ ಬಳಿಕ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.