ಕಾಪುವಿನಲ್ಲಿ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ
ಕಾಪು: ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ರವಿವಾರ ಕಾಪು ಬೀಚ್ನಲ್ಲಿ ಆಯೋಜಿಸಿದ ಗೂಡುದೀಪ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರಕ್ಷಿತ್ ಕುಮಾರ್ ಕಾಪಿಕಾಡ್ ಪಡೆದುಕೊಂಡರು.
ದ್ವಿತೀಯ ಬಹುಮಾನವನ್ನು ರವಿರಾಜ್ ಮಂಗಳೂರು, ತೃತೀಯ ಉಮೇಶ್ ಕಾವೂರು ಬಹುಮಾನ ಪಡೆದು ಕೊಂಡರು. ಕಲಾವಿದರಾದ ಶಶಾಂಕ್, ರಕ್ಷಾ ಮತ್ತು ಯಶವಂತ್ ಗೂಡುದೀಪ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದ್ದರು. ವಿವಿಧ ರೀತಿಯ ಸಾಮಪ್ರದಾಯಿಕ ಗೂಡುದೀಪಗಳು ಮೆಚ್ಚುಗೆಗೆ ಪಾತ್ರವಾಯಿತು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಸಾಂಪ್ರದಾಯಿಕತೆಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸ್ಪರ್ಧೆಗಳು ಅನಿವಾರ್ಯ. ಶಂಕರ ಪ್ರತಿಷ್ಠಾನದ ಕಾರ್ಯವನ್ನು ಶ್ಲಾಘಿಸಿದರು.
ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ಟ್ರಸ್ಟಿ ಶ್ರೀಶ ನಾಯಕ್ ಮಾತನಾಡಿ ಪ್ರತಿವರ್ಷ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ನಮ್ಮ ಟ್ರಸ್ಟ್ ತಂದೆಯ ಆಶಯದಂತೆ ನಡೆಯುತ್ತಿದೆ. ಸಾಂಸ್ಕೃತಿಕ, ಧಾರ್ಮಿಕವಾಗಿ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ಇದೆ ಎಂದರು.
ಆರೋಗ್ಯ ಮತ್ತು ಗೃಹ ನಿರ್ಮಾಣಕ್ಕಾಗಿ ಟ್ರಸ್ಟ್ ವತಿಯಿಂದ ಧನಸಹಾಯ ವಿತರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಉದಯ ಕುಮಾರ್ ಶೆಟ್ಟಿ, ಶಾಸಕ ಲಾಲಾಜಿ ಆರ್ ಮೆಂಡನ್, ಶ್ರೀಕಾಂತ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ವೀಣಾ ಶೆಟ್ಟಿ, ದಿನೇಶ್ ಮೆಂಡನ್, ಗಂಗಾಧರ ಸುವರ್ಣ, ಶಿಲ್ಪಾ ಸುವರ್ಣ, ಮಿಥುನ್ ಹೆಗ್ಡೆ, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಅನಿಲ್ ಶೆಟ್ಟಿ, ಸ್ವೀಕಾರ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ಟ್ರಸ್ಟಿ ಶ್ರೀಶ ನಾಯಕ್ ಸ್ವಾಗತಿಸಿ, ಪ್ರಸ್ತಾವಿಸಿದರು. ಯಶವಂತ್ ಕಾರ್ಯಕ್ರಮ ನಿರೂಪಿಸಿದರು. ಸಂತೋಷ್ ಕುಮಾರ್ ಮೂಡುಬೆಳ್ಳೆ ವಂದಿಸಿದರು.