ಕೋಲಾರದಿಂದಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಬೆಂಬಲಿಗರ ಒತ್ತಾಯ

Update: 2022-10-28 17:48 GMT

ಮೈಸೂರು,ಅ.28: ಮುಂಬರುವ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯಗೆ ಕೋಲಾರದಿಂದ ಆಗಮಿಸಿದ ಸಿದ್ದರಾಮಯ್ಯ ಬೆಂಬಲಿಗರು ಒತ್ತಾಯ ಮಾಡಿದ್ದಾರೆ.

ಕೋಲಾರದಿಂದ ಕಾರ್ಯಕರ್ತರು ಶುಕ್ರವಾರ ಮೈಸೂರಿಗೆ ಆಗಮಿಸಿ  ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಒತ್ತಾಯ ಮಾಡಿದ್ದಾರೆ.  ಮೈಸೂರಿನ ಆಂದೋಲನ ವೃತ್ತದ ಬಳಿ ಪಾರ್ಕ್ ನಲ್ಲಿ ಸಿದ್ದರಾಮಯ್ಯ ವಾಕಿಂಗ್ ಮಾಡುವ ವೇಳೆ ಕೋಲಾರದಿಂದ ಬಂದಿದ್ದ 30ಕ್ಕೂ ಹೆಚ್ಚು ಭೋವಿ  ಸಮುದಾಯದ ಮುಖಂಡರು ಭೇಟಿ ಮಾಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೆ ಸ್ವಾಗತ: ಸಂಸದ ಕೆ.ಎಚ್.ಮುನಿಯಪ್ಪ

ಈ ವೇಳೆ ಬೆಂಬಲಿಗರು ಮುಂದಿನ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಒತ್ತಾಯ ಮಾಡಿದರು. ಈ ವೇಳೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,  ಈ ಬಗ್ಗೆ ಒಂದು ದಿನ ಕೋಲಾರಕ್ಕೆ ಬಂದು ಮಾತನಾಡುತ್ತೇನೆ' ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Similar News