ಉಳ್ಳಾಲ ದರ್ಗಾಕ್ಕೆ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಜಬ್ಬಾರ್ ಖಾನ್ ಭೇಟಿ
Update: 2022-10-30 10:34 GMT
ಉಳ್ಳಾಲ, ಅ.30: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರೂ ಆಗಿರುವ ಜಬ್ಬಾರ್ ಖಾನ್ ಉಳ್ಳಾಲ ದರ್ಗಾ ಕ್ಕೆ ಭೇಟಿ ನೀಡಿ ಝಿಯಾರತ್ ನಡೆಸಿದರು.
ಆ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಯ ಪರವಾಗಿ ಜಬ್ಬಾರ್ ಖಾನ್ ರನ್ನು ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಶಾಲು ಹೊದಿಸಿ ಅಭಿನಂದಿಸಿದರು.
ಈ ವೇಳೆ ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಕೆಪಿಸಿಸಿ ಸಂಯೋಜಕ ಫಾರೂಕ್ ಉಳ್ಳಾಲ್, ದಾವಣಗೆರೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಸಿರಾಜುದ್ದೀನ್, ಉಡುಪಿ ಜಿಲ್ಲಾ ಕಾಂಗ್ರೆಸ್ (ಅ.ಘ) ಅಧ್ಯಕ್ಷ ಇಸ್ಮಾಯೀಲ್, ಮಾಜಿ ಕೌನ್ಸಿಲರ್ ಎ.ಕೆ.ಮೊಹ್ದೀನ್ ಹಾಜಿ ಮುಂತಾದವರು ಉಪಸ್ಥಿತರಿದ್ದರು.