ಗುಜರಾತ್ ಸೇತುವೆ ಕುಸಿತ ಪ್ರಕರಣ: ನ. 14 ರಂದು ಸುಪ್ರೀಂಕೋರ್ಟ್ ವಿಚಾರಣೆ

Update: 2022-11-01 05:30 GMT

ಹೊಸದಿಲ್ಲಿ: ಗುಜರಾತ್ ನ ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ಕುಸಿತ ಪ್ರಕರಣದ ಕುರಿತು, ನ್ಯಾಯಾಂಗ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನವೆಂಬರ್ 14 ರಂದು ವಿಚಾರಣೆ ನಡೆಸಲಿದೆ ಎಂದು ವರದಿಯಾಗಿದೆ.

ಶತಮಾನದಷ್ಟು ಹಳೆಯದಾದ ತೂಗು ಸೇತುವೆ ರವಿವಾರ ಕುಸಿದು ಬಿದ್ದ ಪರಿಣಾಮ 135 ಜನರು ಸಾವನ್ನಪ್ಪಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಘಟನಾ ಸ್ಥಳಕ್ಕೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

Similar News