ವೈದ್ಯ ಕಾಲೇಜು ಶುಲ್ಕ: ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಕಾರ

Update: 2022-11-01 17:22 GMT

ಬೆಂಗಳೂರು, ನ.1: ಖಾಸಗಿ ಅಲ್ಪಸಂಖ್ಯಾತ ವೈದ್ಯ ಕಾಲೇಜುಗಳಲ್ಲಿನ ಸ್ನಾತಕೋತ್ತರ ಪದವಿ ಕೋರ್ಸ್‍ಗಳ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ವಿಚಾರದಲ್ಲಿ ಮಧ್ಯ ಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ. 

ಖಾಸಗಿ ಅಲ್ಪಸಂಖ್ಯಾತ ವೈದ್ಯ ಕಾಲೇಜುಗಳ ಸ್ನಾತಕೋತ್ತರ ಪದವಿ ಕೋರ್ಸ್‍ಗಳಿಗೆ ಹೊಸದಾಗಿ ಸೀಟು ಹಂಚಿಕೆ ಮಾಡಲು ಮತ್ತು ಶುಲ್ಕ ನಿಗದಿಪಡಿಸಲು ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ವೈದೇಹಿ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಅಂಡ್ ರಿಸರ್ಚ್ ಸೆಂಟರ್ ಮತ್ತು ಇತರೆ ಎರಡು ಮೆಡಿಕಲ್ ಕಾಲೇಜುಗಳು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದವು. 

ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಶುಲ್ಕ ನಿಗದಿ ಮತ್ತು ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಘದ ಒಮ್ಮತದ ಒಪ್ಪಂದಕ್ಕೆ ಅರ್ಜಿದಾರ ಕಾಲೇಜುಗಳು ಕೂಡ ಸಹಿ ಹಾಕಿವೆ. ಇಂಥ ಪರಿಸ್ಥಿತಿಯಲ್ಲಿ ಸೀಟು ಹಂಚಿಕೆ ಹಾಗೂ ಶುಲ್ಕ ನಿಗದಿ ವಿಚಾರದಲ್ಲಿ ಮಧ್ಯಪ್ರವೇಶಿಸಲಾಗದು ಎಂದಿದೆ.  

Similar News