"ಸಾಧ್ಯವಾದರೆ ನನ್ನನ್ನು ಬಂಧಿಸಿ": ಈಡಿ ಸಮನ್ಸ್ ಗೆ ಜಾರ್ಖಂಡ್ ಮುಖ್ಯಮಂತ್ರಿ ಪ್ರತಿಕ್ರಿಯೆ

Update: 2022-11-03 10:45 GMT

ರಾಂಚಿ: “ನಾನು ತಪ್ಪಿತಸ್ಥನಾಗಿದ್ದರೆ, ನೀವು ನನ್ನನ್ನು ಏಕೆ ಪ್ರಶ್ನಿಸುತ್ತಿದ್ದೀರಿ? ನಿಮಗೆ ಸಾಧ್ಯವಾದರೆ ಬಂದು ನನ್ನನ್ನು ಬಂಧಿಸಿ” ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಇಂದು ಜಾರಿ ನಿರ್ದೇಶನಾಲಯಕ್ಕೆ (ಈಡಿ)ಸವಾಲು ಎಸೆದಿದ್ದಾರೆ.

 ಕೇಂದ್ರ ತನಿಖಾ ಸಂಸ್ಥೆ ಈಡಿ ತನಗೆ ಸಮನ್ಸ್ ನೀಡಿದ್ದು, “ಬುಡಕಟ್ಟು ಜನಾಂಗದ ಮುಖ್ಯಮಂತ್ರಿಗೆ ಕಿರುಕುಳ ನೀಡುವ ಸಂಚಿನ ಭಾಗ ಇದಾಗಿದೆ” ಎಂದು ಕರೆದಿದ್ದಾರೆ.

"ಆಡಳಿತರೂಢ ಬಿಜೆಪಿಯನ್ನು ವಿರೋಧಿಸುವವರ ಧ್ವನಿಯನ್ನು ಹತ್ತಿಕ್ಕಲು ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಇದಾಗಿದೆ"  ಎಂದು ಹೇಳಿದರು.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಪಡೆದಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ Jharkhand chief minister Hemant Soren ಗುರುವಾರ ಜಾರಿ ನಿರ್ದೇಶನಾಲಯದ (ಈಡಿ) ಕಚೇರಿಗೆ ಹಾಜರಾಗಲಿಲ್ಲ.

ಸೊರೆನ್ ಇಂದು ಬೆಳಿಗ್ಗೆ 11.30 ರ ಸುಮಾರಿಗೆ ಹಾಜರಾಗುತ್ತಾರೆಂದು ನಿರೀಕ್ಷಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳವಣಿಗೆಯ ಬಗ್ಗೆ ಕಾನೂನುಬದ್ಧವಾಗಿ ಪ್ರತಿಕ್ರಿಯಿಸುವ ಹಕ್ಕು ಮುಖ್ಯಮಂತ್ರಿಗೆ ಇದೆ . ಮುಖ್ಯಮಂತ್ರಿ ಅವರು ಸಮನ್ಸ್ ಬಗ್ಗೆ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳುತ್ತಿದ್ದಾರೆ ಹಾಗೂ ಅದರಂತೆ ಕಾರ್ಯನಿರ್ವಹಿಸುತ್ತಿದ್ದಾರೆ" ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ವಕ್ತಾರ ಮನೋಜ್ ಪಾಂಡೆ ಹೇಳಿದ್ದಾರೆ.

Similar News