ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

Update: 2022-11-03 17:22 GMT

ಬೆಂಗಳೂರು, ನ. 3: ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಕ್ಷೇತ್ರದ ಶಾಸಕ ಎಂ. ಪಿ.ರೇಣುಕಾಚಾರ್ಯರ ಸಹೋದರನ ಪುತ್ರನ ಮೃತದೇಹ ಪತ್ತೆಯಾಗಿದ್ದು, ತನಿಖೆಯ ಬಳಿಕ ಪೂರ್ಣ ಮಾಹಿತಿ ಗೊತ್ತಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಮಾತನಾಡಿದ ಅವರು, ರೇಣುಕಾಚಾರ್ಯರ ಅಣ್ಣನ ಮಗನ ಕಾರು ಪತ್ತೆಯಾಗಿದ್ದು, ಕಾರಲ್ಲಿ ಮೃತದೇಹ ಪತ್ತೆಯಾಗಿದೆ. ಇನ್ನೂ ವರದಿ ಬರಬೇಕಿದೆ. ಈ ವರೆಗೂ ಅವರ ಸಾವಿನ ಬಗ್ಗೆ ಯಾವುದೇ ಅನುಮಾನ ವ್ಯಕ್ತವಾಗಿಲ್ಲ. ಆದರೂ ತನಿಖೆಯಿಂದ ಮಾಹಿತಿ ಹೊರಗೆ ಬರಬೇಕಿದೆ ಎಂದು ಹೇಳಿದರು.

ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯಲಿದೆ. ಆದರೆ ತನಿಖಾ ವರದಿ ಬರುವವರೆಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಮೃತದೇಹ ಪತ್ತೆ

Similar News