ವಾಯು ಮಾಲಿನ್ಯದ ಹಿನ್ನೆಲೆ: ದಿಲ್ಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆಯಿಂದ ರಜೆ ಎಂದ ಅರವಿಂದ ಕೇಜ್ರಿವಾಲ್

Update: 2022-11-04 06:21 GMT

ಹೊಸದಿಲ್ಲಿ:  ದಿಲ್ಲಿಯಲ್ಲಿ ವಾಯುಮಾಲಿನ್ಯ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ದಿಲ್ಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಘೋಷಿಸಿದ್ದಾರೆ.

SAFAR ಅಥವಾ ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ದಿಲ್ಲಿಯ ವಾಯು ಗುಣಮಟ್ಟ ಸೂಚ್ಯಂಕವು ಶುಕ್ರವಾರ ಸತತ ಎರಡನೇ ದಿನ 'ತೀವ್ರ' ವಿಭಾಗದಲ್ಲಿ ಉಳಿದಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ನಾಳೆಯಿಂದ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು. 5 ರಿಂದ 7 ನೇ ತರಗತಿಗಳಿಗೆ ಹೊರಾಂಗಣ ಚಟುವಟಿಕೆಗಳನ್ನು ನಿರ್ಬಂಧಿಸಲಾಗುವುದು ಎಂದು ಹೇಳಿದರು.

ದಿಲ್ಲಿಯಲ್ಲಿ ಶನಿವಾರದಿಂದ ಪ್ರಾಥಮಿಕ ತರಗತಿಗಳಿಗೆ ರಜೆ ನೀಡಲಾಗುವುದು.  ಸಮ ಬೆಸ ಯೋಜನೆಯನ್ನು ಹೊಂದಲು ಚಿಂತಿಸುತ್ತಿದ್ದೇವೆ. ನಾವು ಶಾಲೆಗಳಲ್ಲಿ 5ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ  ಹೊರಾಂಗಣ ಕ್ರೀಡಾ ಚಟುವಟಿಕೆಗಳನ್ನು ನಿರ್ಬಂಧಿಸಿದ್ದೇವೆ" ಎಂದು ಕೇಜ್ರಿವಾಲ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯ ಹಾಗೂ  ಹದಗೆಡುತ್ತಿರುವ ಗಾಳಿಯ ಗುಣಮಟ್ಟವು ಕೇವಲ ರಾಷ್ಟ್ರ ರಾಜಧಾನಿಯ ಸಮಸ್ಯೆಯಲ್ಲ. ಕೇಂದ್ರ ಸರಕಾರವು ಮಧ್ಯಪ್ರವೇಶಿಸಿ ಜವಾಬ್ದಾರಿಯನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ ಕೇಜ್ರಿವಾಲ್,   ಈ ಸಮಸ್ಯೆ ಕೃಷಿ ರಾಜ್ಯ ಪಂಜಾಬ್ ಅಥವಾ ದಿಲ್ಲಿಗೆ ಸೀಮಿತವಾಗಿಲ್ಲ ಎಂದು ಹೇಳಿದರು.

Similar News