ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ: ಕಾಂಗ್ರೆಸ್ ತೀವ್ರ ಆಕ್ಷೇಪ

Update: 2022-11-11 09:31 GMT

ಹೊಸದಿಲ್ಲಿ: ದೇಶದ ಮಾಜಿ ಪ್ರಧಾನಿ   ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್ ಆದೇಶಕ್ಕೆ ಕಾಂಗ್ರೆಸ್ ಶುಕ್ರವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

“ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹಂತಕರನ್ನು ಬಿಡುಗಡೆ ಮಾಡಲು ಸುಪ್ರೀಂಕೋರ್ಟ್‌ನ ತೀರ್ಪು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಹಾಗೂ ಇದು  ಸಂಪೂರ್ಣವಾಗಿ ತಪ್ಪಾಗಿದೆ. ಕಾಂಗ್ರೆಸ್ ಪಕ್ಷವು ಇದನ್ನು ಸ್ಪಷ್ಟವಾಗಿ ಟೀಕಿಸುತ್ತದೆ ಹಾಗೂ ಇದು  ಸಂಪೂರ್ಣವಾಗಿ ಅಸಮರ್ಥನೀಯವಾಗಿದೆ. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಭಾರತದ ಆತ್ಮಕ್ಕೆ ಅನುಗುಣವಾಗಿ ನಡೆದುಕೊಳ್ಳದಿರುವುದು ಅತ್ಯಂತ ದುರದೃಷ್ಟಕರ ‘’ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ Congress general secretary Jairam Ramesh ಹೇಳಿದ್ದಾರೆ.

ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ರಾಜೀವ್ ಗಾಂಧಿಯರನ್ನು ಹತ್ಯೆ ಮಾಡಲಾಯಿತು. ರಾಜೀವ್ ಗಾಂಧಿ ಹತ್ಯೆಯಲ್ಲಿನ ಪಾತ್ರಕ್ಕಾಗಿ ಏಳು ದೋಷಿಗಳಿಗೆ ಮರಣದಂಡನೆ ವಿಧಿಸಲಾಗಿತ್ತು

2000 ರಲ್ಲಿ ರಾಜೀವ್ ಗಾಂಧಿ ಅವರ ಪತ್ನಿ ಹಾಗೂ  ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮಧ್ಯಸ್ಥಿಕೆಯ ಮೇರೆಗೆ ನಳಿನಿ ಶ್ರೀಹರನ್ ಅವರ ಶಿಕ್ಷೆಯನ್ನು ಜೀವಾವಧಿಗೆ ಇಳಿಸಲಾಯಿತು. 2008 ರಲ್ಲಿ ರಾಜೀವ್ ಗಾಂಧಿಯವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಳಿನಿ ಅವರನ್ನು ವೆಲ್ಲೂರು ಜೈಲಿನಲ್ಲಿ ಭೇಟಿಯಾಗಿದ್ದರು.

2014ರಲ್ಲಿ ಇನ್ನೂ ಆರು ದೋಷಿಗಳ ಶಿಕ್ಷೆಯನ್ನು ಕೂಡ ತಗ್ಗಿಸಲಾಯಿತು. ಅದೇ ವರ್ಷ, ತಮಿಳುನಾಡು ಆಗಿನ ಮುಖ್ಯಮಂತ್ರಿ ಜೆ. ಜಯಲಲಿತಾ ದೋಷಿಗಳನ್ನು  ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾರಂಭಿಸಿದ್ದರು.

Similar News