ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು...: ಸಿಎಂ ಬೊಮ್ಮಾಯಿ ಹೇಳಿದ್ದೇನು?
ಬೆಂಗಳೂರು, ನ. 11: ‘ಮಾಜಿ ಪ್ರಧಾನಿ ಹಾಗೂ ಜೆಡಿಎಸ್ (Janata Dal (Secular) ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಉದ್ಘಾಟನೆಗೆ ಆಹ್ವಾನ ನೀಡಲಾಗಿತ್ತು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದಾರೆ.
''ನ.10ರಂದು ಖುದ್ದು ನಾನೇ ಪತ್ರ ಬರೆದಿದ್ದು, ‘ಪ್ರಗತಿಯ ಪ್ರತಿಮೆಯ ಅನಾವರಣ ಸುಮುಹೂರ್ತದಲ್ಲಿ ತಾವು ಭಾಗವಹಿಸಬೇಕು ಎಂದು ಈ ಮೂಲಕ ವಿನಂತಿಸುತ್ತಿದ್ದೇನೆ. ತಮ್ಮ ಉಪಸ್ಥಿತಿಯ ಸಮಾರಂಭದ ಶೋಭೆ ಹೆಚ್ಚಿಸಲಿದ್ದು, ತಮ್ಮ ಆಗಮನದ ನಿರೀಕ್ಷೆಯಲ್ಲಿರುತ್ತೇನೆ’ ಎಂದು ದೇವೇಗೌಡರಿಗೆ ಪತ್ರ ಬರೆದು ಕೋರಿದ್ದೇನೆ'' ಎಂದು ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ಹೇಳಿದ್ದೇನು?: ''ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್.ಡಿ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ'' ಎಂದು ಜೆಡಿಎಸ್ ಟ್ವೀಟ್ ಮೂಲಕ ಹೇಳಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದಾರೆ.
ಇದ್ನನ್ನೂ ಓದಿ... ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇವೇಗೌಡರಿಗಿಲ್ಲ ಆಹ್ವಾನ: ಜೆಡಿಎಸ್ ಕಿಡಿ