ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶನಿವಾರ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ
Update: 2022-11-11 18:16 GMT
ಬೆಂಗಳೂರು, ನ.11: ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಶನಿವಾರ ಭಾರೀ ಮಳೆಯ (Rain) ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಮನಗರ, ಚಾಮನಗರ, ಮಂಡ್ಯ, ಮೈಸೂರು ಮತ್ತು ಕೊಡುಗು ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ರವಿವಾರ ಮತ್ತು ಸೋಮವಾರ ಮಳೆಯ ಸಾಧ್ಯತೆ ಕಡಿಮೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.