BJP ಸಂಸದ ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಪ್ರಕರಣ: 18 ಜನರ ವಿರುದ್ಧ FIR
Update: 2022-11-13 13:13 GMT
ಬೆಳಗಾವಿ, ನ. 13: ಬಿಜೆಪಿ ಸಂಸದ ಈರಣ್ಣ ಕಡಾಡಿ (Eranna Kadadi) ಕಾರಿಗೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರ ವಿರುದ್ಧ ಇಲ್ಲಿನ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ನ.11ರಂದು ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿ ಈರಣ್ಣ ಕಡಾಡಿ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ಮುತ್ತಿಗೆ ಹಾಕಿ ಸುತ್ತುವರಿದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದರು.
ಈ ವೇಳೆ ಪ್ರತಿಭಟನಾಕರರನ್ನು ತೆರವುಗೊಳಿಸಲು ಪೊಲೀಸರು ಹರಸಾಹಸಪಟ್ಟಿದ್ದರು. ಸದ್ಯ ವಿವಿಧ ದಲಿತ ಸಂಘಟನೆಗಳ ಮುಖಂಡರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ