ಮುಂಬೈ ವಿಮಾನ ನಿಲ್ದಾಣದಲ್ಲಿ 61 ಕಿ.ಗ್ರಾಂ. ಚಿನ್ನ ವಶ: 7 ಮಂದಿಯ ಬಂಧನ

Update: 2022-11-13 17:22 GMT

ಮುಂಬೈ, ನ. 13: ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 32 ಕೋ. ರೂ. ಮೌಲ್ಯದ 61 ಕಿ.ಗ್ರಾಂ. ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. 

ಕಸ್ಟಮ್ಸ್ ಇಲಾಖೆ ಈ ವಿಮಾನ ನಿಲ್ದಾಣದಲ್ಲಿ ಒಂದೇ ದಿನ ಅತ್ಯಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿರುವುದು ಇದೇ ಮೊದಲು ಎಂದು ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ.
ಈ ಪ್ರಕರಣಗಳಿಗೆ ಸಂಬಂಧಿಸಿ ಐವರು ಪುರುಷರು, ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ 7 ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Similar News