ವಿಜಯಪುರ: ಗೋಳಗುಮ್ಮಟದ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

Update: 2022-11-16 12:54 GMT

ವಿಜಯಪುರ: ಗೋಳಗುಮ್ಮಟ (Gol Gumbaz) ವೀಕ್ಷಣೆಗೆ ಬಂದಿದ್ದ ವ್ಯಕ್ತಿಯೋರ್ವ ಗುಮ್ಮಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. 

ನಗರದ ಗೋಳಗುಮ್ಮಟ ಆವರಣದಲ್ಲಿ ಬುಧವಾರ ಈ ಘಟನೆ ಸಂಭವಿಸಿದ್ದು,  55 ವರ್ಷದ ಸಲೀಮ್ ತಿಕೋಟ್ಕರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.

ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದ ವೇಳೆ ಸಲೀಮ್ ಗೋಳಗುಮ್ಮಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. 

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಈ ಸಂಬಂಧ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Similar News