ಡಿಸೆಂಬರ್ 19ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ; ಸಂಪುಟ ಸಭೆ ನಿರ್ಧಾರ

Update: 2022-11-17 15:17 GMT

ಬೆಂಗಳೂರು, ನ. 17: ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶವನ್ನು ಡಿ.19ರಿಂದ 30ರ ವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್, ‘ಡಿ.19ರಿಂದ ಒಟ್ಟು ಹತ್ತು ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ಕಲಾಪವನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ನಿರ್ಧರಿಸಲಾಗಿದೆ’ ಎಂದರು. 


 

Similar News