‘ಹೊಂಬಾಳೆ’ ಕಂಪೆನಿಯಲ್ಲಿರುವ ಸಿಬ್ಬಂದಿಯೇ ಚಿಲುಮೆ ಸಂಸ್ಥೆಯಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ: ಡಿಕೆಶಿ ಆರೋಪ

Update: 2022-11-19 12:55 GMT

ಬೆಂಗಳೂರು: ಸಚಿವ ಅಶ್ವತ್ಥ್ ನಾರಾಯಣ (Dr C N Ashwath Narayan) ಅವರ ಸಂಬಂಧಿ ಮಾಲಕತ್ವದ ‘ಹೊಂಬಾಳೆ’ (Hombale) ಕಂಪೆನಿಯಲ್ಲಿರುವ ಸಿಬ್ಬಂದಿಯೇ ಚಿಲುಮೆ ಸಂಸ್ಥೆಯಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಆರೋಪಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಭೀರ ಪ್ರಕರಣ ಬೆಳಕಿಗೆ ಬಂದರೂ, ಚಿಲುಮೆ ಸಂಸ್ಥೆಯ ನಿರ್ದೇಶಕರನ್ನು ಈವರೆಗೂ ಬಂಧಿಸಿಲ್ಲ. ಅಷ್ಟೇ ಅಲ್ಲದೆ, ನಿನ್ನೆ ಆ ಸಂಸ್ಥೆ ಕಚೇರಿಯಲ್ಲಿ ನೋಟು ಏಣಿಕೆ ಯಂತ್ರ ಲಭಿಸಿದೆ. ಇದರ ಹಿಂದೆ ಹಲವು ಶಂಕೆ ಹುಟ್ಟುಹಾಕಿದೆ ಎಂದು ಅವರು ತಿಳಿಸಿದರು.

ಇದು ಮತದಾನದ ಹಕ್ಕನ್ನು ಕಸಿದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವಂತಹ ಅಪರಾಧವಾಗಿದೆ ಎಂದ ಅವರು, ನಾನು ರಾಜ್ಯ ಹೈಕೋರ್ಟ್ ನ್ಯಾಯಾಧೀಶರಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಈ ವಿಚಾರದಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು. ಆಕ್ಸಿಜನ್ ದುರಂತ ಪ್ರಕರಣದಲ್ಲಿ ಸುಮೋಟೋ ಪ್ರಕರಣ ದಾಖಲಿಸಿದಂತೆ ಈ ವಿಚಾರದಲ್ಲಿ ಸುಮೋಟೋ ಪ್ರಕರಣ ದಾಖಲಿಸಿ ನಿಮ್ಮ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಶಾಶ್ವತವಾಗಿ ಮುಚ್ಚಿದ ಶೇ.14ರಷ್ಟು ಸಣ್ಣ ಮತ್ತು ಮಧ್ಯಮ ಉದ್ಯಮಗಳು

Similar News