ಚಿಕ್ಕಮಗಳೂರು : ಕಾಡಾನೆ ದಾಳಿಗೆ ಮಹಿಳೆ ಬಲಿ
Update: 2022-11-20 03:24 GMT
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಮೂಡಿಗೆರೆ ತಾಲೂಕಿನ ಉಲ್ಲೇಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ.
ಶೋಭಾ (35) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ ಎಂದು ತಿಳಿದುಬಂದಿದೆ.
ಹುಲ್ಲು ಕತ್ತರಿಸಲು ಹೋದ ಮೂವರು ಮಹಿಳೆಯರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಇಬ್ಬರು ಮಹಿಳೆಯರು ಪಾರಾಗಿದ್ದು, ಗಂಭೀರ ಗಾಯಗೊಂಡ ಶೋಭಾ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.