ಮಂಗಳೂರಿನಲ್ಲಿ ಸ್ಫೋಟ ಪ್ರಕರಣ: ರಾಜ್ಯಾದ್ಯಂತ ಹೈಅಲರ್ಟ್ ಘೋಷಣೆ
Update: 2022-11-20 13:03 GMT
ಬೆಂಗಳೂರು: ಮಂಗಳೂರು(Mangaluru) ನಗರದ ಗರೋಡಿಯಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಸಂಬಂಧ ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿನ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲು ಗೃಹ ಇಲಾಖೆಯು ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಅದರಂತೆ ರವಿವಾರದಿಂದ ತಪಾಸಣೆ ಪ್ರಕ್ರಿಯೆ ಚುರುಕುಗೊಂಡಿದೆ.
ರಾಜಧಾನಿ ಬೆಂಗಳೂರಿನ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳು ಸೇರಿದಂತೆ ಜನನಿಬಿಡ ಪ್ರದೇಶಗಳು, ಪ್ರಮುಖ ಪ್ರವಾಸಿ ತಾಣಗಳು, ಅಣೆಕಟ್ಟುಗಳು ಪ್ರತಿಷ್ಠಿತ ದೇವಾಲಯಗಳು, ಧಾರ್ಮಿಕ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಂಡು ಕಟ್ಟೆಚ್ಚರ, ಮುನ್ನಚ್ಚರಿಕೆ ಕ್ರಮವಾಗಿ ನಿಗಾ ವಹಿಸಲಾಗಿದೆ.