ತರೀಕೆರೆ | ಸ್ನೇಹಿತರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ: ಮೂವರು ಆರೋಪಿಗಳ ಬಂಧನ

Update: 2022-11-21 07:23 GMT

ಚಿಕ್ಕಮಗಳೂರು, ನ.21: ಸ್ನೇಹಿತರ ಮಧ್ಯೆ ಗಲಾಟೆ ನಡೆದು ಓರ್ವನನ್ನು ಕೊಲೆಗೈದ (Murder) ಘಟನೆ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ಕಳೆದ ರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಓಂಕಾರ (30) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳಾದ ಸುನೀಲ್, ಸಂತೋಷ್, ಧನರಾಜ್ ಎಂಬವರನ್ನು ತರೀಕೆರೆ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ರಾತ್ರಿ ಮನೆಯಲ್ಲಿದ್ದ ಓಂಕಾರ ಅವರನ್ನು ಆತನ ಐವರು ಕರೆದೊಯ್ದಿದ್ದಾರೆ. ಈ ವೇಳೆ ಅವರೊಳಗೆ ಹಣಕಾಸಿನ ವಿಚಾರದಲ್ಲಿ ಗಲಾಟೆ ನಡೆದಿದ್ದು, ಓಂಕಾರ ಅವರನ್ನು ಕೊಲೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ಈ ಬಗ್ಗೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News