ಚಿಕ್ಕಮಗಳೂರು: ಅರಣ್ಯ ಇಲಾಖೆಗೆ ಸೇರಿದ ಕಳ್ಳ ಬೇಟೆ ನಿಗ್ರಹ ಶಿಬಿರ ಧ್ವಂಸ

Update: 2022-11-25 10:02 GMT

ಚಿಕ್ಕಮಗಳೂರು: ಆನೆ ದಾಳಿಗೆ ಮೂಡಿಗೆರೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಆಕ್ರೋಶಿತರ ತಂಡವೊಂದು ಅರಣ್ಯ ಇಲಾಖೆಗೆ ಸೇರಿದ ಕಳ್ಳ ಬೇಟೆ ನಿಗ್ರಹ ಶಿಬಿರವನ್ನು ಧ್ವಂಸ ಮಾಡಿರುವ ಘಟನೆ ಕುಂದೂರು ಗ್ರಾಮದಲ್ಲಿ ಶುಕ್ರವಾರ ನಡೆದಿರುವುದಾಗಿರುವುದಾಗಿ ವರದಿಯಾಗಿದೆ.

ಆನೆ ದಾಳಿಯನ್ನು ನಿಯಂತ್ರಿಸಲಾಗದ ಅರಣ್ಯ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಕಚೇರಿಗೆ ನುಗ್ಗಿ ಕೈಗೆ ಸಿಕ್ಕ ಸಿಕ್ಕ ವಸ್ತುಗಳನ್ನೆಲ್ಲಾ ಪುಡಿ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. 

Similar News