ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದುಬೈ ಪ್ರವಾಸಕ್ಕೆ ಕೋರ್ಟ್ ಅನುಮತಿ
Update: 2022-11-26 17:52 GMT
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವೈಯಕ್ತಿಕ ಕೆಲಸದ ಮೇಲೆ ಡಿ.1ರಿಂದ 8ರವರೆಗೆ ದುಬೈಗೆ ತೆರಳಲು ಇಲ್ಲಿನ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.
ದೆಹಲಿ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಕಾಸ್ ಧುಲ್ ಅವರು ಡಿ.ಕೆ.ಶಿವಕುಮಾರ್ ವಿದೇಶಕ್ಕೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದ್ದಾರೆ.
ಡಿಸೆಂಬರ್ ಮೊದಲ ವಾರದಲ್ಲಿ ವಿದೇಶಿ ಪ್ರವಾಸಕ್ಕೆ ತೆರಳಲು ನ.24 (ಗುರುವಾರ) ರಂದು ಡಿ.ಕೆ.ಶಿವಕುಮಾರ್ ಅವರು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ನ.26ರಂದು ಈ ಬಗ್ಗೆ ಅಭಿಪ್ರಾಯ ತಿಳಿಸುವುದಾಗಿ ನ್ಯಾಯಾಲಯ ತಿಳಿಸಿತ್ತು.