ಸಂಜಯ್ ರಾವತ್‍ಗೆ ಬೆಳಗಾವಿ ಕೋರ್ಟ್ ನಿಂದ ಸಮನ್ಸ್
Update: 2022-11-28 17:31 GMT
ಬೆಳಗಾವಿ, ನ.28: ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪದ ಮೇಲೆ ಶಿವಸೇನೆ (ಉದ್ಧವ್ ಠಾಕ್ರೆ ಬಣ) ವಕ್ತಾರ, ರಾಜ್ಯಸಭೆ ಸದಸ್ಯ ಸಂಜಯ್ ರಾವತ್‍ಗೆ ಬೆಳಗಾವಿ ನಾಲ್ಕನೆ ಜೆಎಂಎಫ್‍ಸಿ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.
ಸಂಜಯ್ ರಾವತ್‍ಗೆ ಡಿ.1ಕ್ಕೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
2018ರ ಮೇ 12ರಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಸಮನ್ಸ್ ಜಾರಿಯಾಗಿದೆ. ಪ್ರಚೋದನಾತ್ಮಕ ಭಾಷಣ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು ದೂರು ದಾಖಲಿಸಿದ್ದರು.