ರಾಜ್ಯಾದ್ಯಂತ 60 ರೌಡಿಗಳು ಬಿಜೆಪಿ ಸೇರುತ್ತಿದ್ದಾರೆ: KPCC ವಕ್ತಾರರ ಎಂ. ಲಕ್ಷ್ಮಣ್

Update: 2022-12-01 13:06 GMT

ಬೆಂಗಳೂರು, ಡಿ. 1:  'ರಾಜ್ಯದಲ್ಲಿ 47 ಮಂದಿ ಬಿಜೆಪಿ ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ. ರಾಜ್ಯಾದ್ಯಂತ 60 ರೌಡಿಗಳು ಬಿಜೆಪಿ ಸೇರುತ್ತಿದ್ದಾರೆ' ಎಂದು ಕೆಪಿಸಿಸಿ ವಕ್ತಾರರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ. 

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ''ಇಡೀ ರಾಜ್ಯಾದ್ಯಂತ 60 ರೌಡಿಗಳು ಬಿಜೆಪಿ ಸೇರುತ್ತಿದ್ದಾರಂತೆ, ಈ ಬಗ್ಗೆ ಬಿಜೆಪಿಯಲ್ಲಿ ಚರ್ಚೆಯೂ ಆಗಿದೆಯಂತೆ. ಬಿಜೆಪಿಯ ಮೂರು ಮಂದಿ ಸಂಸದರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ. 13 ಮಂದಿ ಸಚಿವರು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವಿಚಾರಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಇದೀಗ ಸತ್ಯ ಹರಿಶ್ಚಂದ್ರನಂತೆ ಮಾತನಾಡುವ ಸಿ.ಟಿ.ರವಿ ರಸ್ತೆ ಅಪಘಾತ ಪ್ರಕರಣದ ಆರೋಪದಲ್ಲಿದ್ದಾರೆ'' ಎಂದು ಕಿಡಿಕಾರಿದರು. 

''ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಾಹುಲ್‍ಗಾಂಧಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ'' ಎಂದು ಆಕ್ರೋಶ ವ್ಯಕ್ತಪಡಿಸಿದರು. 

--------------------------------------------------------------

''ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಿಂದ ಐಒಸಿಎಲ್‍ಗೆ ಗುತ್ತಿಗೆ ನೀಡಿರುವ ನಿವೇಶನ ಭೂಗಳ್ಳರಿಂದ ಅಕ್ರಮವಾಗಿ ಕಬಳಿಕೆಯಾಗುತ್ತಿದ್ದು, ಇದರಲ್ಲಿ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ. ಬಿಡಿಎ ಹಂಚಿಕೆ ಮಾಡಿರುವ ನಿವೇಶನಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರಕಾರಿ ಸ್ವತ್ತನ್ನು ಕಬಳಿಸುವ ಹುನ್ನಾರ ನಡೆಯುತ್ತಿದೆ. ಐಓಸಿಎಲ್‍ಗೆ ಹಂಚಿಕೆಯಾಗಿರುವ ನಿವೇಶನ ಕೋಟ್ಯಂತರ ರೂ. ಬೆಲೆ ಬಾಳುತ್ತಿದ್ದು, ಅದನ್ನು ಕಬಳಿಸಲು ಮಾಜಿ ಕಾರ್ಪೊರೇಟರ್ ಗಳು ಮತ್ತು ಕೆಲವು ಭೂಗಳ್ಳರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆಗೆ ತಡೆಯೊಡ್ಡಿ ಅಲ್ಲಿನ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ'' 

- ರಮೇಶ್‍ಬಾಬು - ಕೆಪಿಸಿಸಿ ವಕ್ತಾರ ಹಾಗೂ ಪರಿಷತ್ ಮಾಜಿ ಸದಸ್ಯರು 

Similar News