ರೌಡಿ ಶೀಟರ್‌ ಬೆತ್ತನಗೆರೆ ಶಂಕರ ಬಿಜೆಪಿ ಸೇರ್ಪಡೆ: ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ? ಎಂದು ಪ್ರಶ್ನಿಸಿದ ಕಾಂಗ್ರೆಸ್

Update: 2022-12-03 09:04 GMT

ಬೆಂಗಳೂರು, ಡಿ.3: ಇತ್ತೀಚೆಗೆ ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಸಮ್ಮಖದಲ್ಲಿ ರೌಡಿಶೀಟರ್ ತ್ತನಗೆರೆ ಶಂಕರ ಬಿಜೆಪಿ ಸೇರ್ಪಡೆಯಾಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದ್ದು, ಸಂಸದರು ಪಕ್ಷದ ಬಾವುಟ ನೀಡಿ ಬರಮಾಡಿಕೊಳ್ಳುವ ಫೋಟೊ ಒಂದು ವೈರಲ್ ಆಗುತ್ತಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, 'ರೌಡಿಗಳನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಿರುವ ಬಿಜೆಪಿ ನಾಯಕರು ಮತ್ತೊಂದೆಡೆ ರೌಡಿಗಳ ಪಕ್ಷ ಸೇರ್ಪಡೆ ಅಭಿಯಾನವನ್ನೇ ನಡೆಸುತ್ತಿದೆ. ಬೆತ್ತನಗೆರೆ ಶಂಕರ ಎಂಬ ರೌಡಿ ಶೀಟರ್‌ನನ್ನು ಸಂಸದ ಪ್ರತಾಪ್ ಸಿಂಹ  ಪಕ್ಷದ ಬಾವುಟ ನೀಡಿ ಬರಮಾಡಿಕೊಂಡದ್ದಾರೆ' ಎಂದು ಹೇಳಿದೆ. 

''ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ? ಇದೇನಾ ನಿಮ್ಮ ಸಂಸ್ಕೃತಿ'' ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

''ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ''

''ಸಿಎಂ ಬೊಮ್ಮಾಯಿಯವರು ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಸಿಎಂ ಬೊಮ್ಮಾಯಿ ಅವರೇ? ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ'' ಎಂದು ಕಾಂಗ್ರೆಸ್ ಕಿಡಿಕಾರಿದೆ. 

ಇದನ್ನೂ ಓದಿ: ರೌಡಿ ಲಿಸ್ಟ್ ನಲ್ಲಿ ಇದ್ದವರೆಲ್ಲ ರೌಡಿ ಎಂದು ಹೇಳಲಾಗದು, ನನ್ನ ಹೆಸರೂ ಇತ್ತು..: ಸಿ.ಟಿ.ರವಿ

Similar News