ಬೀದಿ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆ ಗೆಲ್ಲಲು ಹೊರಟ ಬಿಜೆಪಿ: ಸಿದ್ದರಾಮಯ್ಯ ಕಿಡಿ
''ರೌಡಿ ಮೋರ್ಚಾ’ ಕಟ್ಟಲು RSS ಸಲಹೆ ನೀಡಿದೆಯೇ?''
ಬೆಂಗಳೂರು, ಡಿ. 3: ‘ಬಾಯಿ ಬಿಟ್ಟರೆ ಸಂಸ್ಕೃತಿ, ಆಚಾರ, ವಿಚಾರದ ಮಂತ್ರ ಉದುರಿಸುವ ಆರೆಸ್ಸೆಸ್ ನಾಯಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕರೆಸಿಕೊಂಡದ್ದು ರೌಡಿ ಮೋರ್ಚಾ ಕಟ್ಟಲು ಸಲಹೆ ನೀಡಲಿಕ್ಕಾಗಿಯೇ? ಆರೆಸ್ಸೆಸ್ ಮೌನ ಸಮ್ಮತಿ ಲಕ್ಷಣವೇ?’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಸೋಲಿನ ಭೀತಿಯಲ್ಲಿರುವ ರಾಜ್ಯ ಬಿಜೆಪಿ ಬೀದಿ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆ ಗೆಲ್ಲಲು ಹೊರಟಿರುವುದು, ಧರ್ಮ, ಸಂಸ್ಕೃತಿ ಬಗ್ಗೆ ಬೊಗಳೆ ಬಿಡುವ ಸಂಘ ಪರಿವಾರದ ನೈತಿಕ ಅಧಃಪತನವಲ್ಲದೆ ಮತ್ತೇನು?’ ಎಂದು ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಗಣಿ ಲೂಟಿಕೋರ ರೌಡಿಗಳನ್ನು ಕಟ್ಟಿಕೊಂಡು ಅಧಿಕಾರಕ್ಕೆ ಬಂದಿದ್ದ ಬಿಜೆಪಿಯ ಮುಖ್ಯಮಂತ್ರಿಗಳು ಕೊನೆಗೆ ಜೈಲು ಪಾಲಾಗಬೇಕಾಯಿತು. ಈಗ ಹೊಸ ರೌಡಿ ಪಡೆ ಕಟ್ಟುತ್ತಿರುವುದು ಯಾರನ್ನು ಜೈಲಿಗೆ ಕಳುಹಿಸಲು?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದು, ಕಾಂಗ್ರೆಸ್ ಬಿಡುಗಡೆ ಮಾಡಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದಿಗೆ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ವೆಬ್ ಸೈಟ್ ಮೂಲಕ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!
ಸೋಲಿನ ಭೀತಿಯಲ್ಲಿರುವ ರಾಜ್ಯಬಿಜೆಪಿ ಬೀದಿ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆ ಗೆಲ್ಲಲು ಹೊರಟಿರುವುದು, ಧರ್ಮ,ಸಂಸ್ಕೃತಿ ಬಗ್ಗೆ ಬೊಗಳೆ ಬಿಡುವ ಸಂಘ ಪರಿವಾರದ ನೈತಿಕ ಅಧ:ಪತನವಲ್ಲದೆ ಮತ್ತೇನು?https://t.co/8uv8bkoY0R
— Siddaramaiah (@siddaramaiah) December 3, 2022