ಡಿ.21ರಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ
Update: 2022-12-08 12:41 GMT
ಬೆಂಗಳೂರು, ಡಿ.8: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಡಿ.21ರಂದು ಚುನಾವಣೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಆದೇಶ ಹೊರಡಿಸಿದ್ದಾರೆ.
ವಿಧಾನಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನದಲ್ಲಿ ರಘುನಾಥ್‍ರಾವ್ ಮಲ್ಕಾಪುರೆ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ವಿಧಾನಪರಿಷತ್ತಿನಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಮತ್ತೊಮ್ಮೆ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ನಡುವೆ ರಘುನಾಥ್‍ರಾವ್ ಮಲ್ಕಾಪುರೆಯವರನ್ನೆ ಸಭಾಪತಿಯಾಗಿ ಆಯ್ಕೆ ಮಾಡಬೇಕು ಎಂಬ ಬೇಡಿಕೆಯೂ ಪಕ್ಷದ ಮುಂದಿದೆ.