ಜ.9ರಿಂದ ಜಿಲ್ಲಾ ಕೇಂದ್ರಗಳಲ್ಲಿ ಬಸ್ ಯಾತ್ರೆ: ಸಿದ್ದರಾಮಯ್ಯ

Update: 2022-12-13 14:21 GMT

ಬೆಂಗಳೂರು, ಡಿ.13: ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಜನವರಿ 9ರಿಂದ ಜಿಲ್ಲಾ ಕೇಂದ್ರಗಳಲ್ಲಿ ಬಸ್ ಯಾತ್ರೆ ಮಾಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರಗಳಲ್ಲಿನ ಯಾತ್ರೆ ಪೂರ್ಣಗೊಂಡ ಬಳಿಕ, ಉತ್ತರ ಕರ್ನಾಟಕ ಭಾಗದಲ್ಲಿ ನನ್ನ ನೇತೃತ್ವದಲ್ಲಿ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಯಾತ್ರೆ ಸಾಗಲಿದೆ ಎಂದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ನಾವು ಪ್ರವಾಸ ಮಾಡುತ್ತೇವೆ. ಜ.9ರಿಂದ ಆರಂಭವಾಗುವ ಯಾತ್ರೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡುತ್ತೇವೆ. ಆನಂತರ, ಎರಡು ತಂಡಗಳಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಪ್ರವಾಸ ಹಮ್ಮಿಕೊಳ್ಳಲಾಗುವುದು. ರಾಜ್ಯದ ಮೂಲೆ ಮೂಲೆಗೂ ನಮ್ಮ ತಂಡಗಳು ಭೇಟಿ ನೀಡಲಿವೆ ಎಂದು ಅವರು ಹೇಳಿದರು.

Similar News