ಗುಬ್ಬಿ: ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತ್ಯು

Update: 2022-12-14 11:31 GMT

ಗುಬ್ಬಿ, ಡಿ.14 : ಕ್ಯಾಂಟರ್ ಮತ್ತು ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಗುಬ್ಬಿ ತಾಲೂಕು ಕೊಂಡ್ಲಿ ಸಮೀಪ ಮಧ್ಯಾಹ್ನ ವರದಿಯಾಗಿದೆ. 

ಮೃತರನ್ನು ರಾಮಣ್ಣ (58) ನಾರಾಯಣಪ್ಪ (54) ಸಾಗರ್ (23) ಎಂದು ಗುರುತಿಸಲಾಗಿದೆ. 

ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರೆಲ್ಲರೂ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಗೋಡೆಕೆರೆ ಸಮೀಪದ ನಡುವನಹಳ್ಳಿ ಗ್ರಾಮದವರಾಗಿದ್ದು, ಒಂದೇ ಕುಟುಂಬದ ಸದಸ್ಯರು ಎಂದು ಹೇಳಲಾಗುತ್ತಿದೆ. 

ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Similar News