ಮೈಸೂರು: ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಕಚೇರಿ ಕಟ್ಟಡಕ್ಕೆ ಬೆಂಕಿ
Update: 2022-12-15 05:38 GMT
ಮೈಸೂರು(Mysuru): ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಕಚೇರಿಯಲ್ಲಿ ಗುರುವಾರ ಬೆಳ್ಳಂಬೆಳಿಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಕಚೇರಿಗೆ ಸೇರಿದ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.
ಕಚೇರಿ ಪಕ್ಕದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೇರಿದ ಮಳಿಗೆಗೂ ಬೆಂಕಿ ಕೆನ್ನಾಲಿಗೆ ಚಾಚಿದೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ವಸ್ತುಪ್ರದರ್ಶನದ ಅಧಿಕಾರಿಗಳಿಂದ ಕೆ.ಆರ್.ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.