ಕಲಾಪ ಸಲಹಾ ಸಮಿತಿ ಸಭೆ; ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸಹಿತ ಪ್ರಮುಖ ವಿಧೇಯಕಗಳ ಮಂಡನೆಗೆ ತೀರ್ಮಾನ

Update: 2022-12-19 16:53 GMT

ಬೆಳಗಾವಿ, ಡಿ, ಡಿ.19:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಧೇಯಕ ಸಹಿತ ಪ್ರಮುಖ ವಿಧೇಯಕಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ.

ಸೋಮವಾರ ಸುವರ್ಣ ವಿಧಾನಸೌಧದಲ್ಲಿನ ಸ್ಪೀಕರ್ ಕೊಠಡಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕಾಂಗ್ರೆಸ್ ಬಹಿಷ್ಕಾರ ಮಾಡಿತ್ತು.

ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ಅನುಪಸ್ಥಿತಿಯಲ್ಲಿ ಕಲಾಪ ಸಲಹಾ ಸಮಿತಿ ಸಭೆ ನಡೆಸಿದ ಕಾಗೇರಿ ಅವರು, ಕನ್ನಡ ಅಭಿವೃದ್ಧಿ ವಿಧೇಯಕ ಮತ್ತು ಗಡಿ ಅಭಿವೃದ್ಧಿಗೆ ಸಂಬಂಧಿಸಿದ ವಿಧೇಯಕಗಳನ್ನು ಇದೇ ವಾರದಲ್ಲಿ ಮಂಡಿಸಬೇಕು. ಜತೆಗೆ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಇದೇ ವಾರ ಚರ್ಚಿಸಬೇಕು ಎಂದು ನಿರ್ಧರಿಸಲಾಗಿದೆ.

ಬಹಿಷ್ಕಾರಕ್ಕೆ ಆಕ್ಷೇಪ:

ವಿಧಾನಸಭೆ ಸಭಾಂಗಣದಲ್ಲಿ ಸಾವರ್ಕರ್ ಅನಾವರಣ ಗೊಳಿಸಿದ್ದನ್ನು ವಿರೋಧಿಸಿ ವಿಪಕ್ಷ ಕಾಂಗ್ರೆಸ್ ಕಲಾಪ ಸಲಹಾ ಸಮಿತಿ ಸಭೆಯನ್ನು ಬಹಿಷ್ಕಾರ ಮಾಡಿದ್ದಕ್ಕೆ ಸ್ಪೀಕರ್ ಆಕ್ಷೇಪಿಸಿದರು. ಸಭೆಯಲ್ಲಿ ಸಭಾನಾಯಕರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ಜೆಡಿಎಸ್ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಸಹಿತ ಇನ್ನಿತರ ಸದಸ್ಯರು ಪಾಲ್ಗೊಂಡಿದ್ದರು. 

Similar News