ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಕೆ. ಎಸ್.‌ ಈಶ್ವರಪ್ಪ - ರಮೇಶ್ ಜಾರಕಿಹೊಳಿ ಭೇಟಿ

Update: 2022-12-19 17:40 GMT

ಬೆಂಗಳೂರು, ಡಿ.19; ಮಾಜಿ ಸಚಿವರಿಬ್ಬರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಕ್ಕೆ ಕಾರಣವಾಗಿದೆ.

ಬಿಜೆಪಿಯ ನಾಯಕರಾದ ಕೆ. ಎಸ್.‌ ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರು ಸೋಮವಾರ ಸಂಜೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ್ದು, ಬಳಿಕ ವಿಮಾನ ನಿಲ್ದಾಣದಿಂದ ಒಟ್ಟಾಗಿ ಇಬ್ಬರೂ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು ಎಂದು ಹೇಳಲಾಗಿದೆ.

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿರುವಾಗಲೇ ಉಭಯ ನಾಯರ ಭೇಟಿ ಕುತೂಹಲ ಮೂಡಿಸಿದೆ. 

ಇನ್ನು ರಮೇಶ್ ಜಾರಕಿಹೊಳಿ ಮತ್ತು ಕೆ. ಎಸ್. ಈಶ್ವರಪ್ಪ ಅವರಿಬ್ಬರೂ ಸೋಮವಾರದ ವಿಧಾನಸಭೆ ಕಲಾಪಕ್ಕೆ ಗೈರಾಗಿದ್ದರು. 

ಸ್ಪೀಕರ್‌ಗೆ ಪತ್ರ ಬರೆದು ಅನುಮತಿ ಪಡೆದ ಈಶ್ವರಪ್ಪ: 

'ಸದನಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹಾಜರಾತಿಯಿಂದ ವಿನಾಯಿತಿ ನೀಡಿ' ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕೆ. ಎಸ್. ಈಶ್ವರಪ್ಪ ಅವರು ಪತ್ರ ಬರೆದಿದ್ದಾರೆ.


 

Similar News