ಮಡಿಕೇರಿ | ಕರ್ತವ್ಯನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ಪ್ರಕರಣ: ಸಹ ಶಿಕ್ಷಕ ಅಮಾನತು
Update: 2022-12-23 12:23 GMT
ಮಡಿಕೇರಿ ಡಿ.23 : ಕರ್ತವ್ಯನಿರತ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಸಹ ಶಿಕ್ಷಕರೋರ್ವರನ್ನು ಸೇವೆಯಿಂದ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ನಾಪೋಕ್ಲು ಸಮೀಪದ ಬೇತುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ನಾಗೇಂದ್ರ ಕೆ.ಜಿ. ಅಮಾನತುಗೊಂಡವರು. ನ.29ರಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವಾಹನ ಚಾಲಕ ಯೋಗೇಶ್ ಎಸ್.ಎನ್. ಅವರಿಗೆ ಹಲ್ಲೆ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪ ಇವರ ಮೇಲಿದ್ದು, ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಂಗಧಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.