ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿ: ದ್ವಿತೀಯ ಸ್ಥಾನ ಭದ್ರಪಡಿಸಿಕೊಂಡ ಭಾರತ

Update: 2022-12-25 18:16 GMT

ಹೊಸದಿಲ್ಲಿ, ಡಿ.25: ಢಾಕಾದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯವನ್ನು ಮೂರು ವಿಕೆಟ್ಗಳ ಅಂತರದಿಂದ ರೋಚಕವಾಗಿ ಗೆದ್ದುಕೊಂಡ ಭಾರತವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂಕಪಟ್ಟಿಯಲ್ಲಿ ತನ್ನ 2ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. 

ಬಾಂಗ್ಲಾದೇಶ ವಿರುದ್ಧ ಕ್ಲೀನ್ಸ್ವೀಪ್ ಸಾಧಿಸಿರುವ ಭಾರತ ಸತತ ಎರಡನೇ ಬಾರಿ ಡಬ್ಲ್ಯುಟಿಸಿ ಫೈನಲ್ಗೆ ತಲುಪುವ ವಿಶ್ವಾಸವನ್ನು ಹೆಚ್ಚಿಸಿ ಕೊಂಡಿದೆ. ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯದ ಬಳಿಕ 2ನೇ ಸ್ಥಾನವನ್ನು ಉಳಿಸಿಕೊಂಡಿದೆ.

ಈ ಗೆಲುವಿನೊಂದಿಗೆ ಭಾರತವು ಆಸ್ಟ್ರೇಲಿಯ ವಿರುದ್ಧ ಸ್ವದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿರುವ 4 ಪಂದ್ಯಗಳ ಟೆಸ್ಟ್ ಸರಣಿಗಿಂತ ಮೊದಲು ತನ್ನ ಗೆಲುವಿನ ಪ್ರತಿಶತವನ್ನು 55.77ರಿಂದ 58.93ಕ್ಕೆ ಏರಿಸಿಕೊಂಡಿದೆ. ಭಾರತವು ಸತತ 2ನೇ ಬಾರಿ ಡಬ್ಲ್ಯುಟಿಸಿ ಫೈನಲ್ನಲ್ಲಿ ಕಾಣಿಸಿಕೊಳ್ಳಬೇಕಾದರೆ ಆಸ್ಟ್ರೇಲಿಯ ವಿರುದ್ಧ ಉತ್ತಮ ಫಲಿತಾಂಶ ದಾಖಲಿಸುವ ಅಗತ್ಯವಿದೆ.

Similar News