ಸಾಗರ: ಟಿಪ್ಪರ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು

Update: 2022-12-28 08:54 GMT

ಸಾಗರ, ಡಿ.28:  ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ(Accident) ಹೊಡೆದ ಪರಿಣಾಮ  ಗಾಯಗೊಂಡ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವರದಿಯಾಗಿದೆ. 

ಬುಧವಾರ ಬೆಳಿಗ್ಗೆ ಸಾಗರದ ಬಿಸಿಎಂ ಹಾಸ್ಟೆಲ್ ನಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಜೋಗದ ಕಡೆಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.  ಇಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವಳಿಗೆ ಗಂಭೀರ ಗಾಯಗಳಾಗಿತ್ತು. ಗಂಭೀರ ಗಾಯಗೊಂಡ 18 ವರ್ಷದ ಪ್ರತಿಮಾ ಇದೀಗ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ. 

ಮೃತ ಪ್ರತಿಮಾ ಶಿಕಾರಿಪುರ ತಾಲೂಕಿನ ಚಿಕ್ಕಕಲವತ್ತಿ ಗ್ರಾಮದವರು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಮೃತಪಟ್ಟ ಹಿನ್ನಲೆಯಲ್ಲಿ ಕಾಲೇಜಿಗೆ ರಜೆಯನ್ನು ಘೋಷಿಸಲಾಗಿದೆ. 

ಈ ಸಂಬಂಧ ಸಾಗರದ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: ಸಾಗರ | ಟಿಪ್ಪರ್ ಢಿಕ್ಕಿ: ಮೂವರು ಕಾಲೇಜು ವಿದ್ಯಾರ್ಥಿನಿಯರಿಗೆ ಗಾಯ

Similar News