ಹೆಬ್ರಿ: ವೃದ್ಧ ವಿಷ ಸೇವಿಸಿ ಆತ್ಮಹತ್ಯೆ
Update: 2022-12-29 16:31 GMT
ಹೆಬ್ರಿ: ಅತಿಯಾದ ಮದ್ಯಪಾನ ಚಟದಿಂದ ಮನನೊಂದ ವೃದ್ಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕು ನಾಲ್ಕೂರು ಗ್ರಾಮದ ಅಂಕ್ರಾಲು ಮೇಲ್ಮನೆಯಿಂದ ವರದಿಯಾಗಿದೆ.
ಸ್ಥಳೀಯ ನಿವಾಸಿ ಕೃಷ್ಣ ನಾಯ್ಕ (71) ಆತ್ಮಹತ್ಯೆ ಮಾಡಿಕೊಂಡವರು. ಮದ್ಯಪಾನದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಮಾನಸಿಕ ಖಿನ್ನತೆಗೊಳಗಾಗಿ ನಿನ್ನೆ ಸಂಜೆಯ ವೇಳೆ ಮನೆಯ ಬಳಿ ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದು, ಕೂಡಲೇ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟರು. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.