ಕೋಲಾರ: ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್
Update: 2023-06-27 10:57 GMT
ಕೋಲಾರ: ಲಂಚ ಪಡೆಯುವ ವೇಳೆ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೋಲಾರದ ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಸುಬಾನಾಯಕ್ ಎಂಬುವರನ್ನು ಬೆಂಗಳುರು ಮೆಟ್ರೋದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಿಕೊಡಲು 6000 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದು, ಲಂಚ ಪಡೆಯುವ ವೇಳೆ ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ತಂಡ ಬೀಸಿದ ಬಲೆಗೆ ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ಬಿದ್ದಿದ್ದಾರೆ.
ಸದ್ಯ ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡಿದ್ದಾರೆ.