ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Update: 2023-06-27 09:29 GMT

ಉಡುಪಿ, ಜೂ.15: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹೆರಿಗೆ ತಜ್ಞರು (ಹಿರಿಯ/ ಅನುಭವವುಳ್ಳ)-2 ಹುದ್ದೆ, ಮಕ್ಕಳ ತಜ್ಞರು, ಆಡಿಯೋಲಾಜಿಸ್ಟ್ ಹಾಗೂ ಇನ್‌ಸ್ಪೆಕ್ಟರ್-ಯಂಗ್ ಹಿಯರಿಂಗ್ ಇಮ್ ಪೇರಿಡ್ ಚಿಲ್ಡ್ರನ್ ತಲಾ -1 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಜೂನ್ 19ರಂದು ಬೆಳಗ್ಗೆ 10:30ಕ್ಕೆ  ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News