ಚಾಮರಾಜನಗರ: ಚಲಿಸುತ್ತಿದ್ದ ಕಾರಿಗೆ ಬೆಂಕಿ
Update: 2023-01-02 04:09 GMT
ಚಾಮರಾಜನಗರ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಕಾರು ಸಂಪೂರ್ಣವಾಗಿ ಭಸ್ಮವಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ- ಗೋಪಾಲಪುರ ಮಾರ್ಗದ ರಸ್ತೆಯಲ್ಲಿ ರೈತರು ಹುರುಳಿ ಒಣ ಸೊಪ್ಪನ್ನು ಒಕ್ಕಣೆಗೆ ಹಾಕಿದ್ದರಿಂದ ಕಾರಿಗೆ ಬೆಂಕಿ ತಗಲಿದೆ ಎನ್ನಲಾಗಿದೆ.
ಕೇರಳ ಮೂಲದ ವ್ಯಕ್ತಿಗಳು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹಾಕಿದ್ದ ಹುರುಳಿ ಒಣ ಸೊಪ್ಪು ಕಾರಿನ ಇಂಜಿನ್ ಗೆ ತಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬೆಂಕಿ ತಗಲುತ್ತಿದ್ದಂತೆ ಕಾರಿನಿಂದ ಐವರು ಇಳಿದು ಪಾರಾಗಿದ್ದಾರೆ.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.